ಈ ಪೈಕಿ ಮುಸ್ಲಿಂ ಹಾಗೂ ಲಿಂಗಾಯತರ ನಡುವೆ ಪೈಪೋಟಿ ನಡೆದಿರುವ ಶಿಗ್ಗಾವಿ ಬಗ್ಗೆ ಹೈಕಮಾಂಡ್ ಖಚಿತ ನಿರ್ಧಾರಕ್ಕೆ ಬಂದಿದೆ. ಕಳೆದ 5 ಬಾರಿ ಟಿಕೆಟ್ ಪಡೆದು ಸೋಲುಂಡಿದ್ದ ಮುಸ್ಲಿಂ ಸಮುದಾಯಕ್ಕೆ ಈ ಬಾರಿ ಟಿಕೆಟ್ ಬೇಡ, ಬದಲಾಗಿ ಪಂಚಮ ಸಾಲಿಗೆ ಟಿಕೆಟ್ ನೀಡಬೇಕು ಎಂಬುದು ಆ ನಿರ್ಧಾರ. ಆದರೆ, ಇದರಿಂದ ಅಸಮಾಧಾನ ಗೊಳ್ಳಲಿರುವ ಅಲ್ಪಸಂಖ್ಯಾತರನ್ನು ಸಮಾಧಾನಗೊಳಿಸುವುದು ಹೇಗೆ ಎಂಬ ಚಿಂತೆ ಕಾಡುತ್ತಿದೆ.