Browse

ಬೆಳಗಾವಿ: ಡಿ.9-20ರವರೆಗೆ ಚಳಿಗಾಲದ ಅಧಿವೇಶನ, ಅಗತ್ಯ ಸಿದ್ಧತೆಗೆ ಸ್ಪೀಕರ್ ಸೂಚನೆ



ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖಾದರ್, ಡಿಸೆಂಬರ್ 9 ರಂದು ಅಧಿವೇಶನ ಪ್ರಾರಂಭವಾಗುವ ಸಾಧ್ಯತೆಗಳಿವೆ. ರಾಜ್ಯ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆಗಳು ನಡೆಯಲಿದ್ದು, ಚರ್ಚೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ದಿನಾಂಕಗಳನ್ನು ಪ್ರಕಟಿಸುತ್ತಾರೆಂದು ಹೇಳಿದರು.ಈಗಾಗಲೇ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಅಧಿವೇಶನವನ್ನು ಪರಿಣಾಮಕಾರಿಯಾಗಿ ಆಯೋಜಿಸಲು ಹಲವು ಸಲಹೆಗಳನ್ನು ನೀಡಲಾಗಿದೆ. ಬೆಳಗಾವಿಯಲ್ಲಿ ಕಳೆದ ವರ್ಷದ ಅಧಿವೇಶನ ಸುಗಮವಾಗಿ ಸಾಗಿದೆ. ಮುಂಬರುವ ಅಧಿವೇಶನವೂ ಇದೇ ಮಾದರಿಯಲ್ಲಿ ನಡೆಯಬೇಕಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.

Share with friends