ಬೆಳಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಸಿಎಂ ಸಿದ್ದರಾಮಯ್ಯ ಹಾಜರು : safgroupPosted on November 6, 2024 Saf news job education No Comments ಬೆಳಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಸಿಎಂ ಸಿದ್ದರಾಮಯ್ಯ ಹಾಜರು : 40 ವರ್ಷಗಳ ರಾಜಕಾರಣದಲ್ಲಿ ಮೊದಲ ವಿಚಾರಣೆನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲಿದ್ದಾರೆ.ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.ನ.6ರಂದು ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಈ ಮೂಲಕ 40 ವರ್ಷಗಳ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ವಿಚಾರಣೆಗೆ ನೋಟಿಸ್ ನೀಡಲಾಗಿದೆ. ಹಾಗಾಗಿ ಇಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. Post Views: 0 Share with friends