ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ `ಪಡಿತರ ಚೀಟಿ’ಗೆ ಅರ್ಜಿ ಸಲ್ಲಿಕೆ ಆರಂಭ : ಈ ದಾಖಲೆಗಳು ಕಡ್ಡಾಯ!

ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಈಗ ಮತ್ತೆ ಅವಕಾಶ ನೀಡಲಾಗಿದೆ. ವೆಬ್ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.ಯಾರಿಗೆಲ್ಲಾ ಅವಕಾಶ?ಅರ್ಹ ಇ – ಶ್ರಮ್‌ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ ಕಾರ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆರಂಭಗೊಂಡಿದೆ. ಅರ್ಹ ಕಾರ್ಮಿಕರು ಆದ್ಯತಾ ಪಡಿತರ ಚೀಟಿ ಪಡೆಯಲು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಿ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 1800 425 9339 ಅಥವಾ ಸಹಾಯವಾಣಿ 1967ಕ್ಕೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯ ಒಳಗಾಗಿ ಸಂಪರ್ಕಿಸಬಹುದು.ಅರ್ಜಿ ಸಲ್ಲಿಸಲು ಅರ್ಹತೆಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರೋರು ಅರ್ಜಿ ಸಲ್ಲಿಸಬಹುದುಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಹಾಕಬಹುದುಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧರಿತವಾಗಿರಲಿದೆ.ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳುವೋಟರ್ ಐಡಿಆಧಾರ್ ಕಾರ್ಡ್ವಯಸ್ಸಿನ ಪ್ರಮಾಣ ಪತ್ರಡ್ರೈವಿಂಗ್ ಲೈಸೆನ್ಸ್ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರಮೊಬೈಲ್ ಸಂಖ್ಯೆಸ್ವಯಂ ಘೋಷಿತ ಪ್ರಮಾಣ ಪತ್ರಸ್ವಯಂ ಘೋಷಿತ ಪ್ರಮಾಣ ಪತ್ರಈ ಮೇಲ್ಕಂಡ ದಾಖಲೆಗಳಿದ್ದಲೇ, ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದು. ಹಾಗಾದ್ರೇ ಅರ್ಜಿ ಸಲ್ಲಿಸೋದು ಹೇಗೆ ಎನ್ನುವ ಹಂತ ಈ ಕೆಳಗಿದೆ.ಹೊಸ ಪಡಿತರ ಚೀಟಿಗಾಗಿ ಈ ಹಂತಗಳನ್ನು ಅನುಸರಿಸಿ, ಅರ್ಜಿ ಸಲ್ಲಿಸಿkar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಬೇಕು.ಈ ಜಾಲತಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳು ಎಂಬಲ್ಲಿ ಕ್ಲಿಕ್ ಮಾಡಿ.ಇದಲ್ಲದೇ https://ahara.kar.nic.in/Home/EServices ತಾಣಕ್ಕೂ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ.ಈ ಜಾಲತಾಣದಲ್ಲಿ ಕ್ಲಿಕ್ ಮಾಡಿದ ನಂತ್ರ, ನೀವು ಇ-ಪಡಿತರ ಚೀಟಿ ಆಯ್ಕೆ. ಆ ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದ್ರೇ..ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋ ಲಿಂಕ್ ಸಿಗಲಿದೆ. ಅಲ್ಲಿ ಕ್ಲಿಕ್ ಮಾಡಿಈ ಬಳಿಕ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಡಿ, ಅಲ್ಲಿ ಕೇಳುವಂತ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ.ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ.ಈ ಬಳಿಕ ಅರ್ಜಿಯ ಜೊತೆಗೆ ಕೇಳುವಂತ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ ಲೋಡ್ ಮಾಡಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿ

Share with friends

Related Post

Leave a Reply

Your email address will not be published.