ಇಂದು ಬೆಳಗ್ಗೆ 10 ಗಂಟೆಗೆ ‘SSLC ಫಲಿತಾಂಶ ಪ್ರಕಟ, ಈ ರೀತಿ ರಿಸಲ್ಟ್ ನೋಡಿ safgroupPosted on May 8, 2023 Saf news job education No Comments ತೀವ್ರ ಕುತೂಹಲ ಕೆರಳಿಸಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶಕ್ಕೆ ( SSLC Exam Results ) ದಿನಾಂಕ ಘೋಷಣೆಯಾಗಿದೆ. ಮೇ.8ರಂದು (ಇಂದು) ಬೆಳಿಗ್ಗೆ 10ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಘೋಷಣೆಯಾಗಲಿದೆ.ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. ಮಾರ್ಚ್ 2023ರ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 31-03-2023ರಿಂದ 15-04-2023ರವರೆಗೆ ನಡೆಸಲಾಯಿತು ಎಂದಿದ್ದಾರೆ.ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 08-05-2023ರಂದು ಬೆಳಿಗ್ಗೆ 10 ಗಂಟೆಗೆ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯ ಜಾಲತಾಣ ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ. https://karresults.nic.in Post Views: 46 Share with friends