ನಿಗಮದ 187 ಕೋಟಿ ರೂ. ಹಗರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಜೈಲಿನಿಂದ ಬಿಡುಗಡೆಯಾದ ಬಳಿಕ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಭೇಟಿಯಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಸ್ ಐಟಿ ತನಿಖೆ ನಡೆಸಿದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಹೆಸರು ಹೇಳುವಂತೆ ಇಡಿ ಒತ್ತಡ ಹಾಕುತ್ತಿತ್ತು ಎಂದು ಆರೋಪಿಸಿದ್ದಾರೆ.ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಸುಮಾರು ಮೂರು ತಿಂಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿ ಮಾಜಿ ಸಚಿವ ಬಿ.ನಾಗೇಂದ್ರ ಅವರು ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ಮರುಕ್ಷಣವೇ ಸಚಿವ ಜಮೀರ್ ಅಹಮದ್ ಖಾನ್ ಅವರ ಮನೆಗೆ ತೆರಳಿದ್ದಾರೆ. ಅಲ್ಲಿ ಇಬ್ಬರೂ ಸಂತಸದಿಂದ ತಬ್ಬಿಕೊಂಡು ಕುಶಲೋಪರಿ ವಿಚಾರಣೆ ಮಾಡಿಕೊಂಡಿದ್ದಾರೆ.