ನನ್ನನ್ನು ಸಂಪುಟದಿಂದ ಕಿತ್ತೊಗೆಯಲು ಸಾಧ್ಯವಿಲ್ಲ: ಸಚಿವ ಝಮೀರ್ನಾನು ಭಾರತೀಯ, ಎಂದಿಗೂ ಕೋಮು-ದ್ವೇಷ ಹರಡುವ ಕೆಲಸ ಮಾಡಿಲ್ಲ’ safgroupPosted on October 31, 2024 Saf news job education No Comments ನನ್ನನ್ನು ಸಂಪುಟದಿಂದ ಕಿತ್ತೊಗೆಯಲು ಸಾಧ್ಯವಿಲ್ಲ: ಸಚಿವ ಝಮೀರ್ನಾನು ಭಾರತೀಯ, ಎಂದಿಗೂ ಕೋಮು-ದ್ವೇಷ ಹರಡುವ ಕೆಲಸ ಮಾಡಿಲ್ಲ’ಹುಬ್ಬಳ್ಳಿ: ನಾನು ಭಾರತೀಯ. 24 ಕ್ಯಾರೆಟ್ ಚಿನ್ನ. ಎಂದಿಗೂ ಕೋಮು-ದ್ವೇಷ ಹರಡುವ ಕೆಲಸ ಮಾಡಿಲ್ಲ. ಪ್ರಹ್ಲಾದ ಜೋಶಿ ಅವರಿಗೆ ಹಿಂದೂ- ಮುಸ್ಲಿಂ ಬಗ್ಗೆ ಮಾತನಾಡುವುದು ಬಿಟ್ಟು ಬೇರೆ ಗೊತ್ತಿಲ್ಲ. ನನ್ನನ್ನು ಸಂಪುಟದಿಂದ ಕಿತ್ತು ಹಾಕಲು ಸಾಧ್ಯವಿಲ್ಲ ಎಂದು ಸಚಿವ ಝಮೀರ್ ಅಹ್ಮದ್ ಖಾನ್ ತಿರುಗೇಟು ನೀಡಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಅಹ್ಮದ್ ಅವರು ಕೋಮು ದ್ವೇಷ ಹರಡುತ್ತಿದ್ದು, ಅವರನ್ನು ಸಂಪುಟದಿಂದ ಕಿತ್ತೊಗೆಯಬೇಕು ಎಂಬ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ತಿರುಗೇಟು ನೀಡಿದರು.ಎಲ್ಲರೂ ಭಾರತೀಯರೆ: ಭಾರತದಲ್ಲಿ ಇರುವವರೆಲ್ಲರೂ ಭಾರತೀಯರು. ಪ್ರಹ್ಲಾದ ಜೋಶಿ ಅವರು ರಾಜಕೀಯದಲ್ಲಿ ಜಾತಿ ಮಾಡಬಾರದು. ಮಾಡುವುದಿದ್ದರೆ ಅವರ ಮನೆಯಲ್ಲಿ ಮಾಡಿಕೊಳ್ಳಲಿ. ಮುಸ್ಲಿಮರು ಬಿಜೆಪಿಗೆ ಮತ ಹಾಕುವುದಿಲ್ಲ ಎಂಬ ಕಾರಣಕ್ಕೆ ನಮ್ಮನ್ನು ವಿರೋಧಿಸುತ್ತಿದ್ದಾರೆ. ಮತ ಹಾಕಿದರೆ ಮಾತ್ರ ನಾವು ಒಳ್ಳೆಯವರು. ಇಲ್ಲದಿದ್ದರೆ ಈ ರೀತಿ ಮಾತನಾಡುತ್ತಾರೆ ಎಂದರು.ರೈತರು ಅನ್ನದಾತರು. ಅವರ ಆಸ್ತಿಯನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಎಲ್ಲದಕ್ಕೂ ಕಾನೂನು ಇದ್ದು ಯಾರ ಆಸ್ತಿಯನ್ನು ಯಾರೂ ಕಿತ್ತುಕೊಳ್ಳಲು ಬರುವುದಿಲ್ಲ. ರಾಜ್ಯದಲ್ಲಿ ಉಪ ಚುನಾವಣೆ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ವಿಷಯವನ್ನು ಬಿಜೆಪಿಯವರು ಮುನ್ನೆಲೆಗೆ ತಂದಿದ್ದಾರೆ, ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು Post Views: 9 Share with friends