ಆಸ್ತಿ ನೋಂದಣಿ ಮಸೂದೆಗೆ ವಿಧಾನಮಂಡಲವು ಇದೇ ಫೆಬ್ರುವರಿಯಲ್ಲಿ ಅನುಮೋದನೆ ನೀಡಿತ್ತು. ಅದನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರ ಅನುಮೋದನೆಗೆ ಕಳುಹಿಸಲಾಗಿತ್ತು. ಆದರೆ, ಅವರು ಕೆಲವು ಸ್ಪಷ್ಟನೆಗಳನ್ನು ಕೇಳಿ ಮಸೂದೆಯನ್ನು ಸರ್ಕಾರಕ್ಕೆ ಮರಳಿಸಿದ್ದರು. ಸ್ಪಷ್ಟನೆ ದೊರೆತ ನಂತರ ಸೆಪ್ಟಂಬರ್ ನಲ್ಲಿ ಮಸೂದೆಗೆ ರಾಜ್ಯಪಾಲರು ಅನುಮೋದನೆ ನೀಡಿ ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿದ್ದರು. ಇದೀಗ ರಾಷ್ಟ್ರಪತಿಗಳು ಮಸೂದೆಗೆ ಅನುಮೋದನೆ ನೀಡಿದೆ.ನಂತರ ಮಸೂದೆಯನ್ನು ರಾಜ್ಯಪಾಲರ ಅನುಮೋದನೆಗೆ ಕಳುಹಿಸಲಾಗಿತ್ತು. ರಾಜ್ಯಪಾಲರು ಮಸೂದೆಗೆ ಸಂಬಂಧಿಸಿದಂತೆ ಕೆಲವು ಸ್ಪಷ್ಟನೆಗಳ ಕೇಳಿದ್ದರು. ಸ್ಪಷ್ಟನೆ ದೊರೆತ ನಂತರ ಸೆಪ್ಟಂಬರ್ ನಲ್ಲಿ ಮಸೂದೆಗೆ ರಾಜ್ಯಪಾಲರು ಅನುಮೋದನೆ ನೀಡಿ ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿದ್ದರು. ಇದೀಗ ರಾಷ್ಟ್ರಪತಿಗಳು ಮಸೂದೆಗೆ ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರವು ಮಸೂದೆ ಜಾರಿಗೆ ಶನಿವಾರ ಅಧಿಸೂಚನೆ ಹೊರಡಿಸಿದೆ.