ಹಾವೇರಿ ವಕ್ಫ್ ಗಲಾಟೆ: ಮುಸ್ಲಿಂ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ..!ಹಾವೇರಿ: safgroupPosted on November 2, 2024 Saf news job education No Comments ಹಾವೇರಿ ವಕ್ಫ್ ಗಲಾಟೆ: ಮುಸ್ಲಿಂ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ..!ಹಾವೇರಿ: ಬಿಜಯಪುರ, ಕಲಬುರಗಿ, ಮಂಡ್ಯ ಸೇರಿದಂತೆ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಸದ್ದು ಮಾಡುತ್ತಿರುವ ವಕ್ಫ್ ಬೋರ್ಡ್ ನೋಟಿಸ್ ವಿಚಾರ ಇದೀಗ ಹಾವೇರಿ ಜಿಲ್ಲೆಗೂ ಕಾಲಿಟ್ಟಿದೆ.ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದೆ.ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡ ಮೊಹಮ್ಮದ್ ರಫಿ ಎಂಬುವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದೆ. ಅಲ್ಲದೆ, ಮನೆ ಮುಂದಿದ್ದ ಬೈಕ್ ಅನ್ನು ಜಖಂ ಮಾಡಲಾಗಿದೆ.ಕಲ್ಲು ತೂರಾಟ ಹಾಗೂ ಪರಿಸ್ಥಿತಿ ಉದ್ವಿಗ್ನಗೊಂಡ ಬೆನ್ನಲ್ಲೇ, ರಾತ್ರೋರಾತ್ರಿ ಹಾವೇರಿ ಡಿಸಿ, ಎಸ್ಪಿ, ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್, ಎಸ್ಪಿ ಅಂಶುಕುಮಾರ್ ಕಡಕೋಳ ಗ್ರಾಮಕ್ಕೆ ದೌಡಾಯಿಸಿದರು. ಮತ್ತೆ ಅಹಿತಕರ ಘಟನೆ ನಡೆಯದಂತೆ ಗ್ರಾಮಸ್ಥರ ಮನವೊಲಿಕೆಗೆ ಯತ್ನಿಸಿದರು. ಗಲಾಟೆಗೆ ಕಾರಣರಾದವರನ್ನು ಬಂಧಿಸಲು ಮುಂದಾದ ಪೊಲೀಸರು, ಗಲಾಟೆಗೆ ಪ್ರಚೋದನೆ ನೀಡಿದರನ್ನೂ ಪತ್ತೆ ಮಾಡಲು ಮುಂದಾಗಿದ್ದಾರೆ. ಸದ್ಯ ಸವಣೂರು ತಾಲೂಕಿನ ಕಡಕೋಳ ಗ್ರಾಮ ಬೂದಿಮುಚ್ಚಿದ ಕೆಂಡದಂತಿದೆ.ಹಲ್ಲೆಗೊಳಗಾದವರಿಂದಲೂ ಮಾಹಿತಿ ಪಡೆದು ದೂರು ಸ್ವೀಕರಿಸುತ್ತೇವೆ. ಗಲಾಟೆಗೆ ಸಂಬಂಧಿಸಿದಂತೆ 15 ಜನರನ್ನು ವಶಕ್ಕೆ ಪಡೆದಿದ್ದೇವೆ. ಭದ್ರತೆಗೆ 4 ಕೆಎಸ್ಆರ್ಪಿ ತುಕಡಿ, 200 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಕಡಕೋಳ ಗ್ರಾಮದಲ್ಲಿ ರೂಟ್ಮಾರ್ಚ್ ಕೂಡಾ ಮಾಡಲಾಗುತ್ತದೆ. ಗಲಾಟೆಯಲ್ಲಿ ದುಷ್ಕರ್ಮಿಗಳು ಕೆಲವರ ಮನೆಗಳ ಗಾಜು ಒಡೆದಿದ್ದಾರೆ. ಸದ್ಯ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಹಲ್ಲೆಗೊಳಗಾದವರಿಗೆ ಎಕ್ಸ್ರೇ ಮಾಡಿಸುತ್ತೇವೆ ಎಂದು ಎಸ್ಪಿ ಅಂಶು ಕುಮಾರ್ ಹೇಳಿದ್ದಾರೆ. Post Views: 2 Share with friends