ಮುಸ್ಲಿಂ ಮೀಸಲಾತಿ ರದ್ದು ಮಾಡಿ ಒಕ್ಕಲಿಗ, ಲಿಂಗಾಯತರಿಗೆ ಕೊಟ್ಟ ಪ್ರಕರಣ: ಏ.18ಕ್ಕೆ ಸುಪ್ರೀಂನಲ್ಲಿ ವಿಚಾರಣೆ
ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ಇತ್ತೀಚೆಗೆ ರದ್ದುಪಡಿಸಿದ ಹಾಗೂ ಒಕ್ಕಲಿಗ ಮತ್ತು ಲಿಂಗಾಯತರ ಮೀಸಲಾತಿ ಹೆಚ್ಚಿಸಿದ ಕರ್ನಾಟಕದ ನಿರ್ಧಾರ ಇದೀಗ ಸುಪ್ರೀಂಕೋರ್ಟ್ ಕಟಕಟೆ ಏರಿದೆ. ಮುಸ್ಲಿಂ ಮೀಸಲು ರದ್ದು ಪ್ರಶ್ನಿಸಿ ಹಿರಿಯ ವಕೀಲ ಕಪಿಲ್ ಸಿಬಲ್ ಸೇರಿ ಕೆಲವರು ಅರ್ಜಿ ಸಲ್ಲಿಸಿದ್ದು, ಏ.18ರಂದು ವಿಚಾರಣೆ ನಡೆಸಲು ಕೋರ್ಟ್ ದಿನಾಂಕ ನಿಗದಿಪಡಿಸಿದೆ. ಇದೇ ವೇಳೆ, ಮೀಸಲು ನಿರ್ಧಾರದ ಬಗ್ಗೆ ಗುರುವಾರ ಕೆಲವು ಕಟು ಅಭಿಪ್ರಾಯಗಳನ್ನು ವ್ಯಕ್ತಪಡಿಸಿರುವ ಕೋರ್ಟ್ (supreme court), ಮೇಲ್ನೋಟಕ್ಕೆ ಈ ನಿರ್ಧಾರ ಆಧಾರವಿಲ್ಲದ್ದು ಹಾಗೂ…