ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ
2022ರ ಜುಲೈ 22ರಂದು ರಾತ್ರಿ ಅಪ್ರಾಪ್ತ ಬಾಲಕಿ ಮನೆಗೆ ಬಂದಿರಲಿಲ್ಲ. ಎಲ್ಲ ಕಡೆ ಹುಡುಕಿದರೂ ಪತ್ತೆಯಾಗಿರಲಿಲ್ಲ. ಆರೋಪಿ ಲೋಕೇಶ್ ಅಪಹರಿಸಿಕೊಂಡು ಹೋಗಿದ್ದಾನೆ ಎಂದು ಪೋಷಕರು ಜುಲೈ 26ರಂದು ಸಂತೇಬೆನ್ನೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖಾಧಿಕಾರಿ ಈ.ಎಸ್.ಮಹೇಶ್, ತನಿಖೆ ನಡೆಸಿದಾಗ ಆರೋಪಿ ಒಂದು ವರ್ಷದಿಂದ ನಿನ್ನನ್ನು ಪ್ರೀತಿಸುತ್ತೇನೆ. ನಿನ್ನನ್ನು ಮದುವೆಯಾಗುವುದಾಗಿ ಅಪಹರಿಸಿ ಹಾಸನ ಜಿಲ್ಲೆ ಅರಸೀಕೆರೆಗೆ ಕರೆದುಕೊಂಡು ಹೋಗಿ ತೋಟದ ಮನೆಯಲ್ಲಿ ಅಪ್ರಾಪ್ತ ಎಂದು ಗೊತ್ತಿದ್ದರೂ ಅವರ ಜೊತೆ ಲೈಂಗಿಕ ಸಂಪರ್ಕ ನಡೆಸಿದ್ದ ಎಂದು ತಿಳಿದ್ದಿದ್ದರಿಂದ ನ್ಯಾಯಾಲಯಕ್ಕೆ ದೋಷರೋಪಣಾ…