ಉಪ ಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಅಕ್ಟೋಬರ್ 25ರಂದು ಪತ್ರ ಬರೆದು, 2024-25 ನೇ ಸಾಲಿನ ಆಯವ್ಯಯದಡಿ ಅನುದಾನ ಬಿಡುಗಡೆ ಮಾಡಲು ಸೂಚಿಸಿದ್ದಾರೆ.
ಆನೇಕಲ್ ವಿಧಾನಸಭೆ ಕ್ಷೇತ್ರಕ್ಕೆ ₹ 5 ಕೋಟಿ ಬಿಡುಗಡೆ ಮಾಡಲಾಗಿದೆ. ಉಳಿದ 26 ವಿಧಾನಸಭೆ ಕ್ಷೇತ್ರಗಳಿಗೆ ತಲಾ ₹10 ಕೋಟಿ ಅನುದಾನವನ್ನು ಬಿಡುಗಡೆ ಮಾಡಲು ಡಿಸಿಎಂ ಸೂಚಿಸಿದ್ದಾರೆ. ಈ ಅನುದಾನದಲ್ಲಿ ಅತಿ ಅಗತ್ಯ ಕಾಮಗಾರಿಗಳನ್ನು ಮಾತ್ರ ಕೈಗೊಳ್ಳಬೇಕು. ಕ್ಷೇತ್ರದ ಶಾಸಕರೊಂದಿಗೆ ಚರ್ಚಿಸಿ ಕ್ರಿಯಾಯೋಜನೆ ರೂಪಿಸಿ ಕಾಮಗಾರಿ ನಡೆಸಲು ಶಿವಕುಮಾರ್ ಆದೇಶಿಸಿದ್ದಾರೆ.