ಪಿಎಸ್ಐ ಎಕ್ಸಾಂಗೆ ಮಹಿಳೆಯರು ಮಂಗಳಸೂತ್ರ, ಕಾಲುಂಗುರ ಧರಿಸಲು ಓಕೆ: ಪುರುಷರು ಕಿವಿಯೋಲೆ, ಉಂಗುರ, ಕಡಗ ಧರಿಸುವಂತಿಲ್ಲ..!

ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಪ್ರತಿಯೊಬ್ಬ ಪರೀಕ್ಷಾರ್ಥಿಯ ಕಿವಿಗಳನ್ನು ತಪಾಸಣೆ ಮಾಡುವ ಹಿನ್ನೆಲೆಯಲ್ಲಿ ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ಇ.ಎನ್. ಟಿ.ತಜ್ಞರನ್ನು ನೇಮಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಅಲ್ಲದೇ ಅವುಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರಬೇಕು ಎಂದು ಎಸ್ಪಿ ಉಮಾ ಪ್ರಶಾಂತ್ ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪರೀಕ್ಷಾ ಪೂರ್ವ ಸಿದ್ದತಾ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಅಭ್ಯರ್ಥಿ ಒಮ್ಮೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಪಡೆದ ನಂತರ ಮತ್ತೆ ಹೊರಗೆ ಹೋಗುವಂತಿಲ್ಲ. ಯಾವುದೇ ಎಲೆಕ್ಟ್ರಾನಿಕ್ ಡಿವೈಸ್ ಇರುವ ಬಗ್ಗೆ ಅಭ್ಯರ್ಥಿಯ ಮೇಲೆ ಅನುಮಾನ ಕಂಡು ಬಂದರೆ ಪೊಲೀಸ್ ಅಧಿಕಾರಿಗಳ ಸಹಾಯದೊಂದಿಗೆ ಚೆಕ್ ಮಾಡಬೇಕು. ಅಲ್ಲದೇ ಪರೀಕ್ಷಾ ಕೇಂದ್ರದ ಒಳಗೆ ನಕಲು ಮಾಡುತ್ತಿರುವ ಬಗ್ಗೆ ಅನುಮಾನ ಬಂದರೆ ತಕ್ಷಣವೇ ಅವರನ್ನು ಪರೀಕ್ಷಾ ಕೊಠಡಿಯಿಂದ ಹೊರಗೆ ಕರೆ ತಂದು ಪೊಲೀಸ್ ಅಧಿಕಾರಿಗಳ ಸಹಕಾರದೊಂದಿಗೆ ತಪಾಸಣೆ ಮಾಡಬೇಕು ಎಂದು ಹೇಳಿದರು.ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಪರೀಕ್ಷೆಯ ದಿನದಂದು ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಧರಿಸುವುದನ್ನು ಖಚಿತ ಪಡಿಸಿಕೊಳ್ಳಬೇಕು. ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ ಧರಿಸಲು ಆದ್ಯತೆ ನೀಡುವುದು. ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ/ಕಡಿಮೆ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮ, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ. ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು. ಅಂದರೆ ಜಿಪ್ ಪಾಕೆಟ್‍ಗಳು, ಪಾಕೆಟ್‍ಗಳು, ದೊಡ್ಡ ಬಟನ್‍ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟಗಳು ಇರಬಾರದು. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ. ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವಂತಿಲ್ಲ.
Share with friends

Related Post

Leave a Reply

Your email address will not be published.