ಪತ್ರಿಕಾ ಪ್ರಕಟಣೆಯಲ್ಲಿ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಮಾಹಿತಿ ಹಂಚಿಕೊಂಡಿದ್ದು, 2024-25ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನ ರಹಿತ ಬಿಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದಿದೆ.
ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ https://schooleducation.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಅಲ್ಲದೇ ದಾಖಲಾತಿ ವೇಳಾಪಟ್ಟಿ, ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರ ಮತ್ತು ಜಿಲ್ಲಾವಾರ ಬಿಇಡಿ ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ನೀಡಲಾಗಿದೆ ಎಂದು ಹೇಳಿದೆ.ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡು ಆನ್ ಲೈನ್ ಮೂಲಕ ಅರ್ಜಿಯನ್ನು ಕ್ರಮಬದ್ಧವಾಗಿ ಭರ್ತಿ ಮಾಡಿ ಸಲ್ಲಿಸುವಂತೆ ತಿಳಿಸಿದೆ.