Browse

BIDAR SHOOTING: ಬೀದರ್‌ನಲ್ಲಿ ಹಾಡಹಗಲೇ ಅಟ್ಯಾಕ್ – ಇಬ್ಬರು ಬ್ಯಾಂಕ್ ಸಿಬ್ಬಂದಿ ಮೃತ..! ದಾಳಿಯ ಶಾಕಿಂಗ್ VIDEO ನೋಡಿ

ಬೀದರ್ : ಬೀದರ್ ನಲ್ಲಿ ಹಾಡ ಹಗಲೇ ನಡೆದ ಶೂಟೌಟ್ ನಲ್ಲಿ ಗಾಯಗೊಂಡಿದ್ದ ಮತ್ತೋರ್ವ ಎಸ್ ಬಿ ಐ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಶಿವಕುಮಾ‌ರ್ ಎಂಬುವವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಸಾವಿನ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.ಇನ್ನು, ದುಷ್ಕರ್ಮಿಗಳ ಗುಂಡಿನ ದಾಳಿಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.ರಾಜಾರೋಷವಾಗಿ ಬೈಕ್ ನಲ್ಲಿ ಬರುವ ಹಂತಕರು ಏಕಾಏಕಿ ಗುಂಡಿನ ಸುರಿಮಳೆಗೈದು ಹಣದೋಚಿ ಪರಾರಿಯಾಗಿದ್ದಾರೆ.ಸರಿ ಸುಮಾರು 93 ಲಕ್ಷ ಹಣ ಎಗರಿಸಿ ಎಸ್ಕೇಪ್ ಆಗಿದ್ದಾರೆ. ವಾಹನದ ಮೇಲೆ ದಾಳಿ ನಡೆಸಿ ಹಣದ ಬಾಕ್ಸ್ ಎಗರಿಸಲಾಗಿದೆ. ಘಟನೆಯ ದೃಶ್ಯಾವಳಿಗಳು ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.ದುಷ್ಕರ್ಮಿಗಳ ಗುಂಡಿನ ದಾಳಿಗೆ ಸ್ಥಳದಲ್ಲೇ ವೆಂಕಟೇಶ್ ಎಂಬ ಸಿಬ್ಬಂದಿ ಮೃತಪಟ್ಟಿದ್ದರು. ಇದೀಗ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಶಿವಕುಮಾ‌ರ್ ಎಂಬುವವರು ಮೃತಪಟ್ಟಿದ್ದಾರೆ.ಬೀದರ್ ನಗರದ ಶಿವಾಜಿ ಚೌಕ್ ನಲ್ಲಿ ಈ ಘಟನೆ ನಡೆದಿತ್ತು. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಎಟಿಎಂಗೆ ಹಣ ಹಾಕುವ ವಾಹನದ ಮೇಲೆ ಗುಂಡು ಹಾರಿಸಿದ್ದರು. ಸ್ಥಳೀಯ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ

Share with friends