BIG NEWS: ಬಿಜೆಪಿ, ಜೆಡಿಎಸ್ ನಿಂದ 25 ಕ್ಕೂ ಹೆಚ್ಚು ನಾಯಕರು ಕಾಂಗ್ರೆಸ್ ಸೇರ್ಪಡೆ : ಡಿ.ಕೆ ಶಿವಕುಮಾರ್ ಹೇಳಿಕೆಗ್ರಾಮಾಂತರ:

BIG NEWS: ಬಿಜೆಪಿ, ಜೆಡಿಎಸ್ ನಿಂದ 25 ಕ್ಕೂ ಹೆಚ್ಚು ನಾಯಕರು ಕಾಂಗ್ರೆಸ್ ಸೇರ್ಪಡೆ : ಡಿ.ಕೆ ಶಿವಕುಮಾರ್ ಹೇಳಿಕೆಗ್ರಾಮಾಂತರ: ಲಕ್ಷ್ಮಣ್ ಸವದಿ ಸೇರಿದಂತೆ ಬಿಜೆಪಿ, ಜೆಡಿಎಸ್ ಪಕ್ಷದಿಂದ ಇನ್ನೂ 25 ನಾಯಕರು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಹಲವು ನಾಯಕರು ಸೇರ್ಪಡೆಗೊಳ್ಳುವ ಒಲವು ತೋರಿಸಿದ್ದಾರೆ.ಶೀಘ್ರವೇ ಅವರೆಲ್ಲಾ ಪಕ್ಷ ಸೇರ್ಪಡೆಯಾಗಲಿದ್ದಾರೆ ‘ಲಕ್ಷ್ಮಣ್ ಸವದಿ ಹಿರಿಯ ನಾಯಕರು. ಅವರು ಯಾವುದೇ ಷರತ್ತು ಇಲ್ಲದೇ ಪಕ್ಷಕ್ಕೆ ಸೇರುತ್ತಿದ್ದು, ನಮ್ಮ ಕುಟುಂಬದ ಸದಸ್ಯರಾಗುತ್ತಿದ್ದಾರೆ. ಅವರು ಪಕ್ಷದ ನಾಯಕತ್ವ, ಸಿದ್ಧಾಂತ ಒಪ್ಪಿ ಪಕ್ಷ ಸೇರುತ್ತಿದ್ದು ಅವರಿಗೆ ಶಕ್ತಿ ತುಂಬುವುದು ನಮ್ಮ ಜವಾಬ್ದಾರಿ. ಇಂದು ಪಕ್ಷದ ನಾಯಕರೆಲ್ಲರೂ ಲಕ್ಷ್ಮಣ ಸವದಿ ಅವರ ಜತೆ ಚರ್ಚೆ ಮಾಡಿದ್ದೇವೆ. ಅವರನ್ನು ಪಕ್ಷದ ಎಲ್ಲಾ ನಾಯಕರು ತುಂಬು ಹೃದಯದ ಸ್ವಾಗತ ಕೋರುತ್ತೇವೆ.ಲಕ್ಷ್ಮಣ ಸವದಿ ಅವರ ಜತೆಗೆ ಇನ್ನು ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಎಲ್ಲರನ್ನೂ ನಾವು ಒಮ್ಮತದಿಂದ ಪಕ್ಷಕ್ಕೆ ಸ್ವಾಗತಿಸುತ್ತೇವೆ. ಸವದಿ ಅವರು ಇಂದು ಸಂಜೆ 4 ಗಂಟೆಗೆ ವಿಧಾನ ಪರಿಷತ್ ಸಭಾಪತಿಗಳನ್ನು ಭೇಟಿ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ 4.30ಕ್ಕೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ’ ಎಂದು ಅವರು ತಿಳಿಸಿದರು.

Share with friends

Related Post

Leave a Reply

Your email address will not be published.