BIG NEWS : ದೇಶದ ಸರಾಸರಿಗಿಂತ ಹೆಚ್ಚು ಪ್ರಗತಿ ಸಾಧಿಸಿದ ಕರ್ನಾಟಕ : CM ಸಿದ್ದರಾಮಯ್ಯ ಮಾಹಿತಿ

ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿ ದೇಶದ ಸರಾಸರಿ ಜಿಎಸ್‌ಡಿಪಿ ಶೇ.8.2 ಆಗಿದೆ.

ಕಳೆದ ಬಾರಿ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ, ಜಾಗತಿಕವಾಗಿ ಐಟಿ ಮಾರುಕಟ್ಟೆ ಹಿನ್ನಡೆ ಅನುಭವಿಸಿದ್ದರೂ, ಕರ್ನಾಟಕ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿದೆ. ನ್ಯಾಷನಲ್‌ ಸ್ಟಾಟಿಸ್ಟಿಕಲ್‌ ಎಸ್ಟಿಮೇಟ್‌ (ಎನ್‌ಎಸ್‌ಸಿ) ಆರಂಭದಲ್ಲಿ ಶೇ. 4ರಷ್ಟು ಕರ್ನಾಟಕದ ಜಿಎಸ್‌ಡಿಪಿ ಅಭಿವೃದ್ಧಿ ದರವನ್ನು ಅಂದಾಜಿಸಿತ್ತು. ಆದರೆ ಹಣಕಾಸು ವರ್ಷದ ಅಂತ್ಯಕ್ಕೆ ರಾಜ್ಯದ ಅಭಿವೃದ್ದಿ ದರ ಶೇ.13.1 ರಷ್ಟಾಗಿದ್ದು, ಎನ್‌ಎಸ್‌ಸಿ ಕರ್ನಾಟಕದ ಪ್ರಗತಿಯನ್ನು ತಪ್ಪಾಗಿ ಅಂದಾಜಿಸಿರುವುದು ಸ್ಪಷ್ಟವಾಗಿದೆ ಎಂದರು.

ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕೃಷಿ ವಲಯದ ಅಭಿವೃದ್ದಿ ಉದ್ದೇಶಿತ ಪ್ರಮಾಣದಲ್ಲಿ ಸಾಧ್ಯವಾಗಿರುವುದಿಲ್ಲ. ಕರ್ನಾಟಕದ Gross State Value Added (ಜಿಎಸ್‌ವಿಎ) ಅಂದರೆ ಒಟ್ಟು ಆರ್ಥಿಕತೆಯಲ್ಲಿ ಐಟಿ ಮತ್ತು ಹಾರ್ಡ್‌ವೇರ್‌ ವಲಯದ ಪಾಲು ಶೇ.28ರಷ್ಟಿದ್ದು, ಜಾಗತಿಕ ಆರ್ಥಿಕ ಹಿಂಜರಿತದಿಂದಾಗಿ ಈ ವಲಯ ಜಾಗತಿಕವಾಗಿ ಹಿನ್ನಡೆ ಅನುಭವಿಸಿದೆ. ಭಾರತದ ಐಟಿ ವಲಯ 2022ರ ಹಣಕಾಸು ಸಾಲಿನಲ್ಲಿ ಶೇ.15.5 ರಷ್ಟು ಪ್ರಗತಿ ಕಂಡದ್ದು, 2023ರ ಅವಧಿಯಲ್ಲಿ ಶೇ.8ಕ್ಕೆ ಕುಸಿತ ಅನುಭವಿಸಿದೆ. ಆದರೆ ಉತ್ತಮ ಆಡಳಿತ ಮತ್ತು ಬಹುವಲಯಗಳ ಅಭಿವೃದ್ಧಿಯಿಂದಾಗಿ ಕರ್ನಾಟಕ ರಾಜ್ಯದ ಆರ್ಥಿಕತೆ ಸ್ಥಿರವಾಗಿರುವುದು ಕಂಡು ಬಂದಿದೆ ಎಂದು ತಿಳಿಸಿದರು.

Share with friends

Related Post

Leave a Reply

Your email address will not be published.