ಮಂಡ್ಯ ಜಿಲ್ಲೆಯ ಕಾರ್ಮೆಲ್ ಶಿಕ್ಷಣ ಸಂಸ್ಥೆಯಲ್ಲಿ ಈ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಪದವಿ ಪೂರ್ವ ಶಿಕ್ಷಣ ಇಲಖೆ ಪ್ರಭಾರ ಉಪನಿರ್ದೇಶಕರು ಕಾರ್ಮೆಲ್ ಶಿಕ್ಷಣ ಸಂಸ್ಥೆ ಮೇಲೆ ಶಿಸ್ತು ಕ್ರಮಕ್ಕೆ ನೋಟಿಸ್ ಜಾರಿ ಮಾಡಿದ್ದಾರೆ.
ಇಂದು ನಡೆಯಬೇಕಿದ್ದ ಜೀವಶಾಸ್ತ್ರ ವಿಷಯದ ಪರೀಕ್ಷೆಯನ್ನು ನವೆಂಬರ್ 19ಕ್ಕೆ ಮುಂದುಡಲಾಗಿದೆ.ಪ್ರಶ್ನೆ ಪತ್ರಿಕೆ ಲೀಕ್ ಆಗಿರುವುದು ತನಿಖೆಯಿಂದ ದೃಢವಾಗಿದೆ. ಹಾಗಾಗಿ ಕಾರ್ಮೆಲ್ ಕಾಲೇಜು ಸಂಸ್ಥೆ ವಿರುದ್ಧ ಶಿಸ್ತು ಕ್ರಮಕ್ಕೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಯಶಣ್ಕರಪ್ಪ ತಿಳಿಸಿದ್ದಾರೆ.