Browse

BREAKING : ನನ್ನ ಮೇಲೆ ‘ED’ ಪ್ರಕರಣ ದಾಖಲಿಸಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಾಂತರ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಬಿ ನಾಗೇಂದ್ರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಇಡಿ ಅಧಿಕಾರಿಗಳು ನನ್ನ ಮೇಲೆ ಯಾವುದೇ ಕೇಸ್ ದಾಖಲಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ರಾಜಕೀಯ ದ್ವೇಷಕ್ಕಾಗಿ ಸಿಬಿಐ, ಇ.ಡಿ.ಯನ್ನು ದುರ್ಬಳಕೆ ಮಾಡಿಕೊಂಡರು. ಯಾರ್‍ಯಾರ ಮೇಲೆ ಕೇಸು ಹಾಕಿದ್ದಾರೆ ಎಂಬುದನ್ನು ನೀವೂ ನೋಡಿದ್ದೀರಿ. ಅಂದಾಗ ಮಹಿಳೆಯೊಬ್ಬರು ನಿಮ್ಮ ಮೇಲು ಇಡಿ ಕೇಸ್ ದಾಖಲಿಸಿದೆ ಅಂದಾಗ ಸಿಎಂ ಸಿದ್ದರಾಮಯ್ಯ ಇಲ್ಲಮ್ಮ ನನ್ನ ಮೇಲೆ ಕೇಸು ಹಾಕಿಲ್ಲ. ನಾಗೇಂದ್ರ ಏನು ಹೇಳಿದರು ಎಂದು ಕೇಳಿದ್ರಲ್ಲ. ಸರ್ಕಾರ ಅಸ್ಥಿರಗೊಳಿಸಲು ಇ.ಡಿ. ದುರ್ಬಳಕೆ ಮಾಡಿಕೊಳ್ತಿದಾರೆ. ನನ್ನ ಮೇಲೆ ಕೇಸು ಹಾಕಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಸುಳ್ಳು ಹೇಳಲ್ಲ. ಕೊಟ್ಟ ಮಾತು ಮರೆಯಲ್ಲ. ನಮ್ಮ ಸರ್ಕಾರ ಎಲ್ಲಾ ಭರವಸೆ ಈಡೇರಿಸುವ ಕೆಲಸ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ಖರ್ಚಾಗುತ್ತಿದೆ. ಈ ಗ್ಯಾರಂಟಿಗಳನ್ನು ಪ್ರಧಾನಿ ಮೋದಿ ಸೇರಿ ಬಿಜೆಪಿಯವರು ಟೀಕೆ ಮಾಡಿದ್ದರು. ಆದರೆ, ಬಜೆಟ್‌ನಲ್ಲೂ ಗ್ಯಾರಂಟಿಗಳಿಗೆ ಅನುದಾನ ಮೀಸಲಿಡಲಾಗಿದೆ. ನಾವು ಹೇಳಿದ್ದನ್ನು ಮಾಡೇ ಮಾಡುತ್ತೇವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎಂಟು ತಿಂಗಳಲ್ಲೇ ಎಲ್ಲಾ ಗ್ಯಾರಂಟಿ ಅನುಷ್ಠಾನಗೊಳಿಸಿದ್ದೇವೆ. ಜನರಿಗೆ ಮೂಲಭೂತ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತಿದೆ ಎಂದರು.

Share with friends