Browse

BREAKING: ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಅವಶೇಷಗಳಡಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ

ನಗರದಲ್ಲಿ ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದೆ. ಈ ಪರಿಣಾಮ ಕಟ್ಟಡ ಕಾಮಗಾರಿಯಲ್ಲಿ ತೊಡಗಿದ್ದಂತ ಹಲವು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು ನಗರದಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದೆ.

ಮಲ್ಲೇಶ್ವರಂ ಸುತ್ತಾಮುತ್ತ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಮಳೆಯಿಂದಾಗಿ ಮರವೊಂದು ಮುರಿದು ಬಿದ್ದ ಪರಿಣಾಮ ಆಟೋ, ಬೈಕ್ ಜಖಂಗೊಂಡಿದ್ದಾವೆ. ರಸ್ತೆಗಳು ಜಲಾವೃತಗೊಂಡು ಎಲ್ಲೆಲ್ಲೂ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಪರದಾಡುತ್ತಿದ್ದಾರೆ.ಮತ್ತೊಂದೆಡೆ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದೆ. ಮೊದಲ ಮಹಡಿಯವರೆಗೆ ನಿರ್ಮಿಸಿದ್ದಂತ ಕಟ್ಟದ ಕುಸಿದು ಬಿದ್ದ ಪರಿಣಾಮ, ಅವಶೇಷಗಳ ಅಡಿಯಲ್ಲಿ ಕೆಲ ಕಾರ್ಮಿಕರು ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ.ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಕುಸಿದು ಬಿದ್ದಿರುವಂತ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಿ, ಅದರಡಿಯಲ್ಲಿ ಸಿಲುಕಿರುವಂತ ಕಾರ್ಮಿಕರನ್ನು ರಕ್ಷಣೆ ಮಾಡುವಂತ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share with friends