Browse

BREAKING: ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್: ಸಾರಿಗೆ ಬಸ್ ಪ್ರಯಾಣ ದರ ಶೇ.15ರಷ್ಟು ಏರಿಕೆಗೆ ಸಂಪುಟ ಅಸ್ತು | KSRTC Bus Ticket Price Hike

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಸಾರಿಗೆ ಬಸ್ಸುಗಳ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಹೀಗಾಗಿ ಶೀಘ್ರವೇ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳದ ಶಾಕ್ ಜನತೆಗೆ ಉಂಟಾಗಲಿದೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಸಾರಿಗೆ ಬಸ್ಸುಗಳ ಟಿಕೆಟ್ ದರ ಹೆಚ್ಚಳದ ಪ್ರಸ್ತಾವನೆ ಕುರಿತಂತೆ ಚರ್ಚೆ ನಡೆಸಲಾಯಿತು. ಅಂತಿಮವಾಗಿ ಶೇ.15ರಷ್ಟು ಪ್ರಯಾಣ ದರ ಏರಿಕೆಗೆ ಸಂಪುಟ ಅನುಮೋದನೆ ನೀಡಿರುವುದಾಗಿ ತಿಳಿದು ಬಂದಿದೆ.

ಅಂದಹಾಗೇ ಸಾರಿಗೆ ಬಸ್ಸುಗಳ ಪ್ರಯಾಣದರವನ್ನು ಶೇ.42ರಷ್ಟು ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದ್ದವು.

ಈ ಬಗ್ಗೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ, ಅಂತಿಮವಾಗಿ, ಶೇ.15ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಲಾಯಿತು. ಹೀಗಾಗಿ ಶೀಘ್ರವೇ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳ ಜಾರಿಗೆ ಬರಲಿದೆ. ಆ ಮೂಲಕ ಕೆ ಎಸ್ ಆರ್ ಟಿಸಿ ಬಸ್ ಟಿಕೆಟ್ ದರದಲ್ಲಿ ಹೆಚ್ಚಳ ಕೂಡ ಆಗಲಿದೆ.

Share with friends