BREAKING : ರಾಜ್ಯ ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ : ಗೌರವಧನ ಹೆಚ್ಚಳಕ್ಕೆ ಶೀಘ್ರವೇ ಕ್ರಮ.!

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಸಿದ ಸಚಿವರು, ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ವಿವಿಧ ಸಂಘಟನೆಗಳೊಂದಿಗೆ ಮಾತುಕತೆ ನಡೆಸಿದರು.

ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನಾನು ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಪರ. ಇಡೀ‌ ದೇಶಕ್ಕೆ ನಮ್ಮ ಅಂಗನವಾಡಿಗಳು ಮಾದರಿಯಾಗಿವೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ, ಮುಂದಿನ ಬಜೆಟ್ ನಲ್ಲಿ ಗೌರವಧನ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

Share with friends

Related Post

Leave a Reply

Your email address will not be published.