Browse

BREAKING : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ: ಪ್ರವಾಸದ ವೇಳೆ ವಿದ್ಯಾರ್ಥಿನಿಯರಿಗೆ ಮದ್ಯ ಕುಡಿಸಿ ಕಿರುಕುಳ!

ಕೊಡಗು : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ ಬೆಳಕಿಗೆ ಬಂದಿದ್ದು ರಾಮನಗರದಲ್ಲಿ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರಿಗೆ ಮದ್ಯಪಾನ ಮಾಡಿಸಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರಿಗೆ ಬಿಯರ್ ಕುಡಿಸಿ ಡ್ಯಾನ್ಸ್ ಮಾಡುವಂತೆ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.ಈ ಕುರಿತಂತೆ ಉಪನ್ಯಾಸಕರಾದ ವಿಶ್ವನಾಥ್, ಲಕ್ಷ್ಮೀಶ್, ನಾಗೇಶ್ ಅವರ ವಿರುದ್ಧ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ.

ಹೌದು ರಾಮನಗರ ಜಿಲ್ಲೆ ಕನಕಪುರ ಪಟ್ಟಣದ ರೂರಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 10ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಕ್ಟೋಬರ್ 5ರಿಂದ 10ರವರೆಗೆ ಕೊಡಗು ಮಡಿಕೇರಿ ಪ್ರವಾಸ ಕೈಗೊಂಡಿದ್ದಾಗ ಈ ಒಂದು ಘಟನೆ ನಡೆದಿದೆ. ಮೂರು ವಿದ್ಯಾರ್ಥಿಯನೀರನ್ನು ಕೂಡಿ ಹಾಕಿ ಮದ್ಯ ಕುಡಿಸಿದ ಆರೋಪ ಕೇಳಿ ಬಂದಿದೆ. ಕಾಲೇಜಿಗೆ ಬಂದ ಬಳಿಕ ಈ ಕುರಿತು ಮಹಿಳಾ ಉಪನ್ಯಾಸಕರಿಗೆ ಮಾಹಿತಿ ನೀಡಲಾಗಿದೆ. ಮಹಿಳಾ ಉಪನ್ಯಾಸಕಿಯರ ಬಳಿ ವಿದ್ಯಾರ್ಥಿನಿಯರು ಹೇಳಿದ್ದರು.

ಆದರೆ ಕಾಲೇಜು ಅಂದಮೇಲೆ ಇದು ಕಾಮನ್ ಎಂದು ಅಧ್ಯಾಪಕಿಯರು ವಿದ್ಯಾರ್ಥಿನಿಯರಿಗೆ ತಿಳಿಸಿದ್ದಾರೆ. ನಂತರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಈ ಒಂದು ವಿಷಯ ತಲುಪಿದೆ. ಉಪನ್ಯಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಕ್ಕಳ ಆಯೋಗ ಸೂಚನೆ ನೀಡಿದೆ. 7 ದಿನದ ಒಳಗೆ ವರದಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದೆ.

Share with friends