ರಾಜ್ಯ ಚುನಾವಣಾ ಆಯೋಗದಿಂದ ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ 641 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ದಿನಾಂಕ ಘೋಷಿಸಲಾಗಿದೆ. ನವೆಂಬರ್.23ಕ್ಕೆ ಮತದಾನ ನಿಗದಿ ಪಡಿಸಿದ್ದರೇ, ನವೆಂಬರ್.25ರಂದು ಮತಏಣಿಕೆ ನಡೆದು ಫಲಿತಾಂಶ ಪ್ರಕಟಿಸಲಾಗುತ್ತದೆ
ಈ ಕುರಿತಂತೆ ಇಂದು ರಾಜ್ಯ ಚುನಾವಣಾ ಆಯೋಗದಿಂದ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಿದೆ ಎಂದಿದೆ.
ದಿನಾಂಕ 06-11-2024ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ. ದಿನಾಂಕ 12-11-2024 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ದಿನಾಂಕ 13-11-2024ರಂದು ನಾಮಪತ್ರಗಳನ್ನು ಪರಿಶೀಲನೆ ನಡೆಸಲಾಗುತ್ತದೆ