ಇದರಲ್ಲಿ 545 ಪಿಎಸ್‌ಐ ಹುದ್ದೆಗಳ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಸರ್ಕಾರ ಸೋಮವಾರ ಬಿಡುಗಡೆ ಮಾಡಿದೆ. ಈ ಮೂಲಕ ಆರೋಪ ಮಾಡುತ್ತಿದ್ದ ವಿಪಕ್ಷಗಳಿಗೆ ತಿರುಗೇಟು ನೀಡಿದೆ. ಬಸವರಾಜ್ ಬೊಮ್ಮಾಯಿ ಸಿಎಂ ಆಗಿದ್ದ ಅವಧಿಯಲ್ಲಿ ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆಯಲ್ಲಿ ಆದ ಅಕ್ರಮ ಸಂಚಲನ ಸೃಷ್ಟಿಸಿತ್ತು. ಇದಾದ ಬಳಿಕ ಹೈಕೋರ್ಟ್ ನೀಡಿದ್ದ ಸೂಚನೆಯ ಅನ್ವಯ ರಾಜ್ಯ ಸರ್ಕಾರ ಮರು ಪರೀಕ್ಷೆ ನಡೆಸಿತ್ತು. ಆದರೆ ಫಲಿತಾಂಶ ಹೊರ ಬಿಟ್ಟಿತೆ ವಿನಃ ಆಯ್ಕೆ ಪಟ್ಟಿ ಪ್ರಕಟಿಸಿರಲಿಲ್ಲ. ಇದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ರಾಜ್ಯ ಸರ್ಕಾರ ಅಕ್ಟೊಬರ್ 21ರಂದು ಪಿಎಸ್‌ಐ ನೇರ ನೇಮಕಾತಿಗಳ 01.01.2023ರ ಸುತ್ತೋಲೆಯ ಅನ್ವಯ ಆಯ್ಕೆ ಪಟ್ಟಿ ತಯಾರಿಸಿ ಪ್ರಕಟಗೊಳಿಸಿದೆ.
ಆಯ್ಕೆಯನ್ನು ಪ್ರಕಟಿಸುವ ಸಂದರ್ಭದಲ್ಲಿ ಈ ಆಯ್ಕೆ ಪಟ್ಟಿಯು ಮಾನ್ಯ ಉಚ್ಚ ನ್ಯಾಯಾಲಯವು ರಿಟೊ ಪಿಟಿಷನ್ 20:16343/20240 ಅಂತಿಮ ತೀರ್ಪಿಗೊಳಪಟ್ಟಿದೆ. ಅಲ್ಲದೇ ಈ ಆಯ್ಕೆ ಪಟ್ಟಿಯ ವೃಂದ ಬದಲಾವಣೆ, ಮೀಸಲಾತಿ ಪ್ರಚಾರ ಬದಲಾವಣೆ, ಅರ್ಹತಾ ಸ್ಥಾನ ಮತ್ತು ಘಟಕಗಳ ಬದಲಾವಣೆ ಆಗುವ ಸಾಧ್ಯತೆಗಳಿರುವ ಷರತ್ತುಗಳನ್ನು ವಿಧಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.