ಎಪಿಎಲ್ ಆಗಿದ್ದ ಕಾರ್ಡುಗಳು ಬಿಪಿಎಲ್ ಆಗಿ ಪರಿವರ್ತನೆ:ಕಾರ್ಡುದಾರರು ನಿರಾಳ!
ಆಹಾರ ಇಲಾಖೆಯಿಂದ ಕಳೆದ ತಿಂಗಳು ಬಿಪಿಎಲ್ ಕಾರ್ಡ್ ಗಳನ್ನು ಪರಿಷ್ಕರಣೆ ನಡೆಸಿ ವಿವಿಧ ಕಾರಣಗಳಿಂದ ಕಾರ್ಡ್ ಗಳನ್ನು ಗುರುತಿಸಿ ಅವುಗಳನ್ನು ಎಪಿಎಲ್ ಕಾರ್ಡ್ ಗಳನ್ನಾಗಿ ಬದಲಾವಣೆ ಮಾಡಲಾಗಿತ್ತು. ಇದರಿಂದಾಗಿ ಬಿಪಿಎಲ್ ಕಾರ್ಡ್ ಗಳನ್ನು ಕಳೆದುಕೊಂಡಿದ್ದ ಗ್ರಾಹಕರು ಸರ್ಕಾರಕ್ಕೆ ಮನವಿ ಸಲ್ಲಿಸಿ ನಮ್ಮ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಪಡಿಸಬಾರದು ಎಂದು ಕೇಳಿಕೊಂಡಿದ್ದರು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಸಹ ಈಬಗ್ಗೆ ಸರ್ಕಾರದ ಗಮನವನ್ನು ಸೆಳೆದಿತ್ತು. ಶಿವಮೊಗ್ಗ ಜಿಲ್ಲೆಯಲ್ಲಿ ನಿಗದಿತ ಮಾರ್ಗಸೂಚಿಯಂತೆ ಆಹಾರ ಇಲಾಖೆ ಬಿಪಿಎಲ್ ಕಾರ್ಡ್…