Congress Candidate: ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಿಸಿದ ಸಿದ್ದರಾಮಯ್ಯ

ಮೈಸೂರು, ಅಕ್ಟೋಬರ್‌ 22: ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರು ಕ್ಷೇತ್ರಗಳ ಉಪಚುನಾವಣೆಯನ್ನು ಗೆಲ್ಲಲು ಸಿಎಂ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಮಾಸ್ಟರ್ ಪ್ಲ್ಯಾನ್ ಮಾಡುತ್ತಿದೆ. ಆಡಳಿತ ರೂಢ ಸರ್ಕಾರ ಇರುವಾಗ ಉಪ ಚುನಾವಣೆ ಸೋತಲ್ಲಿ ಅದು ತೀವ್ರ ಮುಖಭಂಗ ಆಗುವ ಹಿನ್ನೆಲೆಯಲ್ಲಿ ಕ್ಷೇತ್ರಗಳನ್ನು ಗೆಲ್ಲಲು ರಣತಂತ್ರವನ್ನು ರೂಪಿಸಲಾಗುತ್ತಿದೆ.

ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರು ಕ್ಷೇತ್ರಗಳ ಉಪಚುನಾವಣೆಯನ್ನು ಗೆಲ್ಲಲು ಅಳೆದು ತೂಗಿ ಅಭ್ಯರ್ಥಿ ಆಯ್ಕೆಯನ್ನ ಕಾಂಗ್ರೆಸ್‌ ನಾಯಕರು ಮಾಡುತ್ತಿದ್ದಾರೆ. ಇತ್ತ ಬಿಜೆಪಿ ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಮಾಡಿದ್ದು, ಚನ್ನಪಟ್ಟಣ ಕ್ಷೇತ್ರವನ್ನ ಜೆಡಿಎಸ್‌ ಗೆ ಬಿಟ್ಟುಕೊಟ್ಟಿದೆ. ಇನ್ನೂ ಸಿದ್ದರಾಮಯ್ಯ ಅವರು ಮೂರು ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಸಚಿವರುಗಳಿಗೆ ಟಾಸ್ಟ್‌ ನೀಡಿದ್ದು, ಸಂಡೂರು ಅಭ್ಯರ್ಥಿಯನ್ನ ಮೈಸೂರಿನಲ್ಲಿ ಘೋಷಿಸಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಈ.ತುಕಾರಾಂ ಅವರ ಪತ್ನಿ ಅವರಿಗೆ ಟಿಕೆಟ್ ನೀಡಲಾಗುವುದು. ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆ ಆಗಿದೆ. ಡಿ.ಕೆ.ಸುರೇಶ್ ಅವರೂ ಕೂಡ ಪ್ರಭಲ ಅಭ್ಯರ್ಥಿ ಆಗಿದ್ದಾರೆ. ಒಂದೆರಡು ದಿನಗಳಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವ್ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಎನ್ನುವುದು ಸ್ಪಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

Share with friends

Related Post

Leave a Reply

Your email address will not be published.