Browse

Controversy : ಹಿಂದೂ ಹುಡುಗರ ವಿರುದ್ಧ 1 ಲಕ್ಷಕ್ಕೂ ಹೆಚ್ಚು ಯುವತಿಯರನ್ನ ವೇಶ್ಯೆಯರನ್ನಾಗಿಸಿದ ಆರೋಪ!

‘ಹಿಂದುತ್ವದ ಹುಡುಗರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಮಾಜಕ್ಕೆ ಸೇರಿದ 1 ಲಕ್ಷಕ್ಕೂ ಅಧಿಕ ಹುಡುಗಿಯರನ್ನು ವೇಶ್ಯೆಯರನ್ನಾಗಿಸಿದ್ದಾರೆ. ಇದಕ್ಕೆ ನನ್ನ ಬಳಿ 10,000 ದಾಖಲೆಗಳಿವೆ’ ಎಂದು ಪಂಜ ಉಪವಲಯ ಅರಣ್ಯಾಧಿಕಾರಿಯೋರ್ವ ಹೇಳಿಕೆ ನೀಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.

ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬ ವ್ಯಕ್ತಿಯು, ಹಿಂದೂ ಸಂಘಟನೆಯ ಕಾರ್ಯಕರ್ತ ಸುರೇಶ್ ಎಂಬುವವರ ಜೊತೆ ಪೋನಿನಲ್ಲಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕಿದ್ದು, ಹಿಂದೂ ಹೆಣ್ಣುಮಕ್ಕಳ ಬಗ್ಗೆ ಈ ರೀತಿ ಅಸಹ್ಯ ಹಾಗೂ ಅವಮಾನಕರ ಹೇಳಿಕೆ ನೀಡಿದ್ದಾನೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

Share with friends