Government Employee: ಅನುಕಂಪ ಆಧಾರಿತ ನೇಮಕಾತಿಯಲ್ಲಿ ಬದಲಾವಣೆ, ವಿವರ

ಅಕ್ಟೋಬರ್ 20: ಅನುಕಂಪ ಆಧಾರಿತ ನೇಮಕಾತಿಯಲ್ಲಿ ಕೆಲವು ಬದಲಾವಣೆಗಳು ಆಗಿವೆ. ಈ ಕುರಿತು ಅಧಿಸೂಚನೆ ಪ್ರಕಟಿಸಲಾಗಿದ್ದು, ಮಾಹಿತಿ ನೀಡಲಾಗಿದೆ. ಈ ಅಧಿಸೂಚನೆ ಅನುಕಂಪದ ಆಧಾರದ ಮೇಲೆ ನೌಕರಿ ಪ್ರಸ್ತಾವನೆಗಳನ್ನು ಆನ್‌ಲೈನ್ ತಂತ್ರಾಂಶದಲ್ಲಿ ನಿರ್ವಹಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

ಅನುಕಂಪದ ನೇಮಕಾತಿ ನಿಯಮಗಳು-1996ರ ತಿದ್ದುಪಡಿ ಆದೇಶ, ಶಾಲಾ ಶಿಕ್ಷಣ ಇಲಾಖೆಯ ಕಛೇರಿಯ ಸುತ್ತೋಲೆಗಳಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಡಾ‌. ತ್ರಿಲೋಕ್ ಚಂದ್ರ ಕೆ. ವಿ. ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಸೂಚನೆ ಹೊರಡಿಸಿದ್ದಾರೆ. ಈವಿಷಯದನ್ವಯ ಅನುಕಂಪದ ನೇಮಕಾತಿ ಅರ್ಜಿಗಳನ್ನು ಸಂಪೂರ್ಣವಾಗಿ ಆನ್‌ಲೈನ್ ತಂತ್ರಾಂಶದ ಮುಖಾಂತರ ಇಇಡಿಎಸ್ ನಲ್ಲಿ ನಿರ್ವಹಿಸಲು ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ ಮತ್ತು ಇಲಾಖಾ ವೆಬ್‌ಸೈಟ್ https://schooleducation.karnataka.gov.in ಅಳವಡಿಸಲಾಗಿದೆ ಎಂದು ಹೇಳಿದ್ದಾರೆ.

Share with friends

Related Post

Leave a Reply

Your email address will not be published.