Jagadish Shettar: ಕುತೂಹಲ ಕೆರಳಿಸಿದ ಅಮಿತ್ ಶಾ – ಶೆಟ್ಟರ್ ಮಾತುಕತೆ!

ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾಗಿದೆ. ಆದರೆ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡದಂತೆ ಶೆಟ್ಟರ್ (jagadish shettar) ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ರಾಜ್ಯ ನಾಯಕರು ಮಾತ್ರವಲ್ಲ, ಬಿಜೆಪಿಯ ಪವರ್ ಫುಲ್ ಮ್ಯಾನ್ ಅಮಿತ್ ಶಾ (amit shah) ಖುದ್ದು ಕರೆ ಮಾಡಿ ಶೆಟ್ಟರ್ ಜೊತೆ ಮಾತನಾಡಿದ್ದಾರಂತೆ.

ಜಗದೀಶ್ ಶೆಟ್ಟರ್ ರಾಜೀನಾಮೆ ಬಿಜೆಪಿಗೆ ವಿಧಾನಸಭೆ ಚುನಾವಣೆಯಲ್ಲಿ ದೊಡ್ಡ ಪೆಟ್ಟು ನೀಡುವುದು ಪಕ್ಕಾ ಎನ್ನಲಾಗುತ್ತಿದೆ. ಈ ನಡುವೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶೆಟ್ಟರ್ ಅವರನ್ನು ಹೇಗಾದರೂ ಮನವೊಲಿಸಿ, ಬಿಜೆಪಿಯಲ್ಲೇ ಉಳಿಸಿಕೊಳ್ಳುವ ಕಸರತ್ತು ಆರಂಭ ಆಗಿದೆ. ಈಗಾಗಲೇ ಶಾಸಕ ಸ್ಥಾನಕ್ಕೆ ರಿಸೈನ್ ಕೊಟ್ಟು ರೆಬೆಲ್ ಆಗಿರುವ ಮಾಜಿ ಸಿಎಂ ಶೆಟ್ಟರ್, ಪಕ್ಷದ ಸದಸ್ಯತ್ವಕ್ಕೂ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಆದರೆ ಈಗ ಖುದ್ದು ಅಮಿತ್ ಶಾ ಅವರೇ ಎಂಟ್ರಿಯಾಗಿ ಶೆಟ್ಟರ್ ಮನವೊಲಿಕೆಗೆ ಮುಂದಾಗಿದ್ದಾರೆ.ಬಂಡಾಯಕ್ಕೆ ನೀರು ಎರಚರಲು ವರಿಷ್ಠರ ಎಂಟ್ರಿ ಬಿಜೆಪಿಯ ಪವರ್ ಫುಲ್ ಮ್ಯಾನ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಖುದ್ದು ಜಗದೀಶ್ ಶೆಟ್ಟರ್ ಅವರ ಜೊತೆ ಮಾತನಾಡಿದ್ದಾರಂತೆ. ಈ ಮೂಲಕ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡದಂತೆ ಆದೇಶಿಸಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಬಂಡಾಯ ಶಮನಕ್ಕೆ ಖುದ್ದು ಬಿಜೆಪಿ ವರಿಷ್ಠರೇ ಎಂಟ್ರಿ ಕೊಟ್ಟಂತೆ ಕಾಣುತ್ತಿದೆ. ಆದರೂ ಟಿಕೆಟ್ ಸಿಗದ ಕೋಪಕ್ಕೆ ಬಿಜೆಪಿಯಲ್ಲಿ ಇನ್ನಷ್ಟು ನಾಯಕರು ಬಂಡೆದ್ದು ಪಕ್ಷಾಂತರ ಮಾಡುವ ಸಾಧ್ಯತೆ ದಟ್ಟವಾಗಿದೆ.ನಾಮಪತ್ರ ಸಲ್ಲಿಕೆಗೆ ಕೆಲದಿನ ಬಾಕಿ ಇರುವಂತೆ ಈ ಬೆಳವಣಿಗೆ ಕಮಲ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ.ಶೆಟ್ಟರ್ ಮನವೊಲಿಕೆಗೆ ಬಿಜೆಪಿ ಸರ್ಕಸ್

ಒಂದು ಲೆಕ್ಕಾಚಾರದ ಪ್ರಕಾರ ಜಗದೀಶ್ ಶೆಟ್ಟರ್ ಅವರಿಗೆ ಈ ಬಾರಿ ಟಿಕೆಟ್ ಕೊಡಲೇಬಾರದು ಎಂಬ ನಿರ್ಧಾರಕ್ಕೆ ಬಿಜೆಪಿ ನಾಯಕರು ಬಂದಂತೆ ಕಾಣುತ್ತಿದೆ. ಹೀಗಾಗಿಯೇ ಶೆಟ್ಟರ್ ಅವರಿಗೆ ರಾಜ್ಯಸಭಾ ಸದಸ್ಯ ಸ್ಥಾನದ ಆಫರ್ ನೀಡಲಾಗಿತ್ತು. ಇದರೊಂದಿಗೆ ಕೇಂದ್ರದಲ್ಲಿ ಪ್ರಮುಖ ಜವಾಬ್ದಾರಿ ನೀಡುವ ಭರವಸೆ ನೀಡಲಾಗಿತ್ತು. ದೇಶದ ಯಾವುದಾದರೂ ರಾಜ್ಯದ ರಾಜ್ಯಪಾಲರನ್ನಾಗಿ ಮಾಡುವ ಭರವಸೆಯ ಜೊತೆಗೆ, ಹು-ಧಾ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಕುಟುಂಬದ ಸದಸ್ಯರಿಗೆ ನೀಡುವ ಬಗ್ಗೆಯೂ ಶೆಟ್ಟರ್ ಗೆ ಆಯ್ಕೆ ನೀಡಲಾಗಿತ್ತು. ಕುಟುಂಬದವರಿಗೆ ಬೇಡ ಎನ್ನುವುದಾದರೆ ಅವರು ಸೂಚಿಸುವ ಕಾರ್ಯಕರ್ತಗೆ ಟಿಕೆಟ್ ನೀಡುವುದಾಗಿ ತಿಳಿಸಿತ್ತು ಬಿಜೆಪಿ ಹೈಕಮಾಂಡ್.ಕಾಂಗ್ರೆಸ್ ಸೇರಲು ಶೆಟ್ಟರ್ ಸಿದ್ಧತೆ?

ಈಗಾಗಲೇ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿಗೆ ಗುಡ್‌ಬೈ ಹೇಳುವ ಮೂಲಕ ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಇದೀಗ ಮತ್ತೊಬ್ಬ ಪ್ರಭಾವಿ ಲಿಂಗಾಯತ ಸಮುದಾಯದ ನಾಯಕ ಜಗದೀಶ್ ಶೆಟ್ಟರ್ ಕೂಡ ಇದೇ ನಿರ್ಧಾರ ಕೈಗೊಳ್ಳುತ್ತಾರೆ ಎನ್ನಲಾಗುತ್ತಿದೆ. ಜಗದೀಶ್ ಶೆಟ್ಟರ್ ರಾಜೀನಾಮೆ ಸಲ್ಲಿಸಿ, ಇಂದು ಸಂಜೆ ವೇಳೆಗೆ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತು ಬಿಜೆಪಿ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಕೇಸರಿ ಪಾಳಯಕ್ಕೆ. ಉತ್ತರ ಕರ್ನಾಕಟದಲ್ಲಿ ಬಿಜೆಪಿಗೆ ಇದು ದೊಡ್ಡ ಹೊಡೆತ ನೀಡಲಿದೆ ಎಂಬುದು ರಾಜಕೀಯ ಪರಿಣತರ ಲೆಕ್ಕಾಚಾರ.

ಒಟ್ಟಾರೆ ಹೇಳುವುದಾದರೆ ಶೆಟ್ಟರ್ ಅವರನ್ನ ಬಿಜೆಪಿಯಲ್ಲೇ ಉಳಿಸಿಕೊಳ್ಳಲು ಈಗಲೂ ಬಿಜೆಪಿ ವರಿಷ್ಠರು ಪ್ರಯತ್ನಿಸುತ್ತಿದ್ದಾರೆ. ಆದರೆ ಈ ಬಗ್ಗೆ ಜಗದೀಶ್ ಶೆಟ್ಟರ್ ಅಧಿಕೃತವಾಗಿ ಏನನ್ನೂ ಹೇಳಿಲ್ಲ. ಶೆಟ್ಟರ್ ಅವರ ನಡೆ ಈಗಲೂ ನಿಗೂಢವಾಗಿದ್ದು, ಮುಂದೆ ಏನಾಗಲಿದೆ ಎಂಬುದರ ಮೇಲೆ ಬಿಜೆಪಿ ನಾಯಕರ ನಡೆ ನಿರ್ಧಾರವಾಗಲಿದೆ. ಹಾಗೇ ವಿಧಾನಸಭೆ ಚುನಾವಣೆಯಲ್ಲೂ ಈ ಬೆಳವಣಿಗೆ ದೊಡ್ಡ ಪರಿಣಾಮ ಬೀರುವುದು ಪಕ್ಕಾ.

Share with friends

Related Post

Leave a Reply

Your email address will not be published.