KPSC ‘ಬಿ’ ವೃಂದದ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಲೋಕಸೇವಾ ಆಯೋಗದ ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ / ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ.

ಪರೀಕ್ಷೆಗಳನ್ನು ಏಪ್ರಿಲ್ 11 ಮತ್ತು 12 ರಂದು ನಡೆಸುತ್ತಿದ್ದು, ಸದರಿ ಪರೀಕ್ಷೆಗಳಿಗೆ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳು ಆಯೋಗದ ವೆಬ್ ಸೈಟ್

http://kpsc.kar.nic.in

ಮೂಲಕ ಏಪ್ರಿಲ್ 5 ರಿಂದಲೇ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಅಭ್ಯರ್ಥಿಗಳು ವೆಬ್ ಸೈಟ್ ಮೂಲಕ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದ್ದು, ಒಂದೊಮ್ಮೆ ಈ ವೇಳೆ ತಾಂತ್ರಿಕ ಸಮಸ್ಯೆ ಎದುರಾದಲ್ಲಿ ಹೆಲ್ಪ್ ಲೈನ್ ಸಂಖ್ಯೆ 18005728707 ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ, ಸುರಳ್ಕರ್ ವಿಕಾಸ್ ಕಿಶೋರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share with friends

Related Post

Leave a Reply

Your email address will not be published.