
ಅಧಿಸೂಚನೆಯಲ್ಲಿನ ಗ್ರೂಪ್-ಸಿ ವೃಂದದ ಮೋಟಾರು ವಾಹನ ನಿರೀಕ್ಷಕರು 70 (ಆರ್‌ಪಿಸಿ) ಹುದ್ದೆಗಳಿಗೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಅರ್ಹ ಅಭ್ಯರ್ಥಿಗಳು ದಿನಾಂಕ 05-11-2024 ರಿಂದ 12-11-2024 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿದೆ. ಅಭ್ಯರ್ಥಿಗಳು ವಿಸ್ತರಿತ ಕೊನೆಯ ದಿನಾಂಕವಾದ 20-11-2024ಕ್ಕೆ ಆಯಾ ಮೀಸಲಾತಿಗಳ ಮುಂದೆ ನಮೂದಿಸಿರುವ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು. ಈ ಹಿಂದೆ ತಾಂತ್ರಿಕ ಕಾರಣದಿಂದ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿ ಮಾಡಲು ಸಾಧ್ಯವಾಗದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.