KPSC- ಸಾರಿಗೆ ಇಲಾಖೆ ನೇಮಕಾತಿಯಲ್ಲಿ ಬದಲಾವಣೆ safgroupPosted on October 31, 2024 Saf news job education No Comments ಕರ್ನಾಟಕ ಲೋಕಸೇವಾ ಆಯೋಗ ಸಾರಿಗೆ ಇಲಾಖೆಯು ಹೊರಡಿಸಿದ್ದಂತಹ ನೇಮಕಾತಿಯಲ್ಲಿ ತಿದ್ದುಪಡಿ ಮಾಡಿ ಅಧಿಸೂಚನೆಯನ್ನು ಹೊರಡಿಸಿದ್ದು, ವಯೋಮಿತಿಯನ್ನು ಬದಲಾವಣೆ ಮಾಡಲಾಗಿದೆ. ಇನ್ನುಳಿದಂತೆ ಹಿಂದಿನ ಅಧಿಸೂಚನೆಗಳಲ್ಲಿ ತಿಳಿಸಲಾಗಿರುವ ಮಾಹಿತಿ/ ವಿವರಗಳನ್ನು ಯಥಾವತ್ತಾಗಿ ಅನ್ವಯಿಸಿಕೊಳ್ಳತಕ್ಕದ್ದು ಹಾಗೂ ಹೆಚ್ಚಿನ ವಿವರಗಳಿಗಾಗಿ ಸದರಿ ಅಧಿಸೂಚನೆಗಳನ್ನು ಓದಿಕೊಳ್ಳತಕ್ಕದ್ದು ಎಂದು ರಮಣದೀಪ್ ಚೌಧರಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.ಅಧಿಸೂಚನೆಯಲ್ಲಿನ ಗ್ರೂಪ್-ಸಿ ವೃಂದದ ಮೋಟಾರು ವಾಹನ ನಿರೀಕ್ಷಕರು 70 (ಆರ್‌ಪಿಸಿ) ಹುದ್ದೆಗಳಿಗೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಅರ್ಹ ಅಭ್ಯರ್ಥಿಗಳು ದಿನಾಂಕ 05-11-2024 ರಿಂದ 12-11-2024 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿದೆ. ಅಭ್ಯರ್ಥಿಗಳು ವಿಸ್ತರಿತ ಕೊನೆಯ ದಿನಾಂಕವಾದ 20-11-2024ಕ್ಕೆ ಆಯಾ ಮೀಸಲಾತಿಗಳ ಮುಂದೆ ನಮೂದಿಸಿರುವ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು. ಈ ಹಿಂದೆ ತಾಂತ್ರಿಕ ಕಾರಣದಿಂದ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿ ಮಾಡಲು ಸಾಧ್ಯವಾಗದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ. Post Views: 2 Share with friends