KPTCL Recruitment: ಕೆಪಿಟಿಸಿಎಲ್ ನೇಮಕಾತಿ, 2,975 ಹುದ್ದೆ 10ನೇ ತರಗತಿ ವಿದ್ಯಾರ್ಹತೆ safgroupPosted on October 17, 2024 Saf news job education No Comments ಅಕ್ಟೋಬರ್ 15: ಸರ್ಕಾರಿ ನೌಕರಿಗಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿಯೊಂದಿದೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 21 ರಿಂದ 20/11/2024ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದೆ.ಕಲ್ಯಾಣ ಕರ್ನಾಟಕ ಮತ್ತು ಇತರ ಜಿಲ್ಲೆಗಳಲ್ಲಿಯೂ ನೇಮಕಾತಿ ನಡೆಯುತ್ತಿದ್ದು, ವಿವರವಾದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.ನೇಮಕಾತಿ ಅಧಿಸೂಚನೆಯು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ 411 (380 + 31 ಬ್ಯಾಕ್‌ಲಾಗ್) ಕಿರಿಯ ಸ್ಟೇಷನ್ ಪರಿಚಾರಕ ಮತ್ತು 81 (75 + 6 ಬ್ಯಾಕ್‌ಲಾಗ್) ಕಿರಿಯ ಪವರ್‌ಮ್ಯಾನ್ ಹುದ್ದೆಗಳನ್ನು ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ 2,268 (1818 + 450 ಬ್ಯಾಕ್‌ಲಾಗ್) ಕಿರಿಯ ಪವರ್‌ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಹೇಳಿದೆ. Post Views: 1 Share with friends