Lakshmi Hebbalkar: ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ವಿರುದ್ಧ ಎಫ್‌ಐಆರ್! ಎಸ್‌ಡಿಎ ಅಧಿಕಾರಿ ಆತ್ಮಹತ್ಯೆ ಕೇಸ್‌ನಲ್ಲಿ ಸೋಮುಗೆ ಸಂಕಷ್ಟಬೆಳಗಾವಿ

Lakshmi Hebbalkar: ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ವಿರುದ್ಧ ಎಫ್‌ಐಆರ್! ಎಸ್‌ಡಿಎ ಅಧಿಕಾರಿ ಆತ್ಮಹತ್ಯೆ ಕೇಸ್‌ನಲ್ಲಿ ಸೋಮುಗೆ ಸಂಕಷ್ಟಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದ 35 ವರ್ಷದ ರುದ್ರಣ್ಣ ಯಡಣ್ಣನವರ್ (SDA Rudranna Yadannanavar) ಆತ್ಮಹತ್ಯಗೆ (Suicide) ಶರಣಾಗಿದ್ದಾರೆ. ನಿನ್ನೆ ಅಂದ್ರೆ (ನವೆಂಬರ್ 4) ಬೆಳಗಾವಿ ಕಚೇರಿಯಿಂದ ಸವದತ್ತಿಯ ತಹಶೀಲ್ದಾರ್ ಕಚೇರಿಗೆ (Tahasheeldar) ರುದ್ರಣ್ಣ ಅವರನ್ನು ಟ್ರಾನ್ಸಫರ್ ಮಾಡಿ ಜಿಲ್ಲಾಧಿಕಾರಿ ಮೊಹಮದ್ ರೋಷನ್ ಅವರು ಆದೇಶ ಮಾಡಿದ್ದರು.ಆದ್ರೆ, ಇಂದು ಬೆಳಗಿನಿ ಜಾವ ತಹಶೀಲ್ದಾರ್ ಕಚೇರಿಗೆ ಬಂದಿದ್ದ ರುದ್ರಣ್ಣ, ತಹಶೀಲ್ದಾರ್ ಬಸರಾಜ್ ಕೊಠಡಿಯಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ

ಶರಣಾಗಿದ್ದಾರೆ.ವರ್ಗಾವಣೆ ದಂಧೆಗೆ ಬಲಿಯಾದ್ರಾ ರುದ್ರಣ್ಣSDA ರುದ್ರಣ್ಣನವರ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ವರ್ಗಾವಣೆ ದಂಧೆಗೆ ರುದ್ರಣ್ಣ ಬಲಿಯಾದ್ನಾ ಎನ್ನುವ ಅನುಮಾನ ಹುಟ್ಟುವಂತೆ ಮಾಡಿದೆ. ಅದಕ್ಕೆ ಕಾರಣ ರುದ್ರಣ್ಣ ಅವರು ನಿನ್ನೆ ತಮ್ಮ ವಾಟ್ಸಾಪ್ ಮೆಸೇಜ್‌ನಲ್ಲಿ ನನ್ನ ಸಾವಿಗೆ ತಹಶೀಲ್ದಾರ್ ಬಸವರಾಜ್ ನಾಗರಾಳ ಹಾಗೂ ಸೋಮು ಇವರೇ ನೇರಕಾರಣ ಎಂದು ಉಲ್ಲೇಖಿಸಿದ್ದರು. ಈ ಸೋಮು ಎಂಬಾತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆಪ್ತ ಸಹಾಯಕರಾಗಿದ್ದಾರೆ.ಲಕ್ಷ್ಮಿ ಹೆಬ್ಬಾಳಕರ್ ಪಿಎ ವಿರುದ್ಧ ಎಫ್‌ಐಆರ್ಸದ್ಯ ಎಸ್‌ಡಿಎ ರುದ್ರಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಸಹಾಯಕ ಸೋಮು ಸೇರಿ ಮೂರು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬೆಳಗಾವಿಯ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಯಿ ಮಲ್ಲವ್ವ ಅವರು ನೀಡಿದ ದೂರಿನನ್ವಯ ಎಫ್‌ಐಆರ್ ದಾಖಲಿಸಲಾಗಿದೆ.ಬಿಎನ್‌ಎಸ್ ಕಾಯ್ದೆಯಡಿ ಪ್ರಕರಣ ದಾಖಲುಬೆಳಗಾವಿ ನಗರದ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ತಹಶೀಲ್ದಾರ್ ಬಸವರಾಜ ನಾಗರಾಳ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು ಮತ್ತು ಸಹೋದ್ಯೋಗಿ ಅಶೋಕ ಕಬ್ಬಲಿಗೇರ್ ಮೇಲೆ ಕೇಸ್ ದಾಖಲಾಗಿದೆ. ಬಿಎನ್‌ಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ವಾಟ್ಸಪ್ ನಲ್ಲಿ ನನ್ನ ಸಾವಿಗೆ ಮೂರು ಜನ ಕಾರಣ ಎಂದು ರುದ್ರಣ್ಣನವರು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದರು.ಡೆಟ್ ನೋಟ್ ಬರೆದು ಆತ್ಮಹತ್ಯೆಸರ್ಕಾರಿ ನೌಕರ ಆತ್ಮಹತ್ಯೆಗೆ ಶರಣಾಗುವ ಮುನ್ನ ರಾಜ್ಯ ಸರ್ಕಾರದ ಪ್ರಭಾವಿ ಸಚಿವರ ಆಪ್ತ ಸಹಾಯಕನ (ಪಿಎ) ಹೆಸರು ಬರೆದಿಟ್ಟಿದ್ದಾರೆ. ಬೆಳಗಾವಿಯ ತಹಶೀಲ್ದಾರ್ ಬಸವರಾಜ್ ನಾಗರಾಳ‌ ಚೇಂಬರ್‌ನಲ್ಲಿಯೇ ಕೆಲಸ ಮಾಡುತ್ತಿದ್ದ ಎಫ್‌ಡಿಸಿ ರುದ್ರಣ್ಣ ಯಡಣ್ಣವರ ಇದೇ ಬೆಳಗಾವಿ ಜಿಲ್ಲೆಯ ರಾಯಭಾಗ ಮೂಲದರಾಗಿದ್ದರು. ಇನ್ನು ನೌಕರ ಬರೆದಿಟ್ಟಿದ್ದ ಡೆತ್ ನೋಟ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂದಿದ್ದಾರೆ.ವಾಟ್ಸಾಪ್ ಗ್ರೂಪ್‌ನಲ್ಲಿ ಸಂದೇಶ ರವಾನಿಸಿದ್ದ ರುದ್ರಣ್ಣಘಟನಾ ಸ್ಥಳಕ್ಕೆ ತಹಶೀಲ್ದಾರ್, ಖಡೇಬಜಾರ್ ಪೊಲೀಸರ‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೂ ಮುನ್ನ ವಾಟ್ಸಪ್ ಗ್ರೂಪ್‌ಲ್ಲಿ ಸಂದೇಶ ರವಾನಿಸಿದ್ದ ರುದ್ರಣ್ಣ. ಬೆಳಗಾವಿ ತಹಶಿಲ್ದಾರ್ ಕಚೇರಿ ಸಿಬ್ಬಂದಿಯ ವಾಟ್ಸಪ್ ಗ್ರೂಪಲ್ಲಿ ಸಂದೇಶ ಕಳುಹಿಸಿದ್ದಾರೆ. ನಾನು ಆತ್ಮಹತ್ಯೆಗೆ ಶರಣಾಗುವುದಾಗಿ ಗ್ರೂಪ್‌ನಲ್ಲಿ ಮೆಸೆಜ್ ಮಾಡಿದ್ದರು. ನನ್ನ ಸಾವಿಗೆ ತಹಶೀಲ್ದಾರ್ ಬಸವರಾಜ್ ನಾಗರಾಳ ಹಾಗೂ ಸಚಿವರ ಆಪ್ತ ಸಹಾಯಕ ಸೋಮು ಅವರೇ ಕಾರಣ ಎಂದು ಬರೆದಿದ್ದಾರೆ.ಲಕ್ಷ್ಮಿ ಹೆಬ್ಬಾಳಕರ್ ಆಪ್ತ ಕಾರ್ಯದರ್ಶಿ ಸೋಮುಈ ಡೆತ್ ನೋಟ್‌ನಲ್ಲಿ ಬರೆದಿಟ್ಟ ಸೋಮು ದೊಡದವಾದ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಕಾರ್ಯದರ್ಶಿ ಆಗಿದ್ದಾರೆ. ನಮ್ಮ ತಹಶೀಲ್ದಾರ್ ಕಚೇರಿಯಲ್ಲಿ ‌ತುಂಬಾ ಅನ್ಯಾಯ ನಡೆಯುತ್ತಿದೆ.

ಎಲ್ಲರೂ ಒಟ್ಟಾಗಿ ಹೋರಾಡಿ ಎಂದು ಮೆಸೇಜ್ ಮೂಲಕ‌ ಮನವಿ ಮಾಡಿದ್ದು, ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ.ಆತ್ಮಹತ್ಯೆಗೂ ಮುನ್ನಾ ಕಳಿಸಿದ್ದ ವಾಟ್ಸಾಪ್ ಸಂದೇಶನಿನ್ನೆ ವರ್ಗಾವಣೆ ಇಂದು ಆತ್ಮಹತ್ಯೆಮೃತ ಸರ್ಕಾರಿ ನೌಕರ ರುದ್ರಣ್ಣ ಅವರು ನಿನ್ನೆಯಷ್ಟೇ ಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗಾವಣೆ ಆಗಿದ್ದರು. ಬೆಳಗಾವಿ ‌ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಅವರಿಂದ ಆದೇಶ ಹೊರಡಿಸಲಾಗಿತ್ತು. ಎಫ್‌ಡಿಸಿ ರುದ್ರಣ್ಣ ಆತ್ಮಹತ್ಯೆ ವಿಷಯ ತಿಳಿಯುತ್ತಿದ್ದಂತೆ ‌ಸ್ಥಳಕ್ಕೆ ಕುಟುಂಬಸ್ಥರ ಭೇಟಿ ನೀಡಿದ್ದಾರೆ. ರುದ್ರಣ್ಣನ ಪತ್ನಿ ಗಿರಿಜಾ ಹಾಗೂ‌ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.(ವರದಿ: ಚಂದ್ರಕಾಂತ್ ಸುಗಂಧಿ, ನ್ಯೂಸ್18 ಕನ್ನಡ)

Share with friends

Related Post

Leave a Reply

Your email address will not be published.