ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳು (Government Officers) ಹಾಗೂ ನೌಕರರಿಗೆ ಲೋಕಾಯುಕ್ತ ಅಧಿಕಾರಿಗಳು (Lokayukta Officers) ಶಾಕ್ ನೀಡಿದ್ದಾರೆ. ಹೌದು ರಾಜ್ಯದ ಹಲವೆಡೆ ಸರ್ಕಾರಿ ನೌಕರರ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ಭ್ರಷ್ಟರಿಗೆ (Corrupt) ಬಿಸಿ ಮುಟ್ಟಿಸಿದ್ದಾರೆ.
ಧಾರವಾಡ, ಹಾವೇರಿ, ಮಂಡ್ಯ, ಬೀದರ್, ದಾವಣಗೆರೆ ಹಾಗೂ ಚಿಕ್ಕೋಡಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೈಡ್ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಧಾರವಾಡ
ಧಾರವಾಡದಲ್ಲಿ ಏಕಕಾಲಕ್ಕೆ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಕೆಐಎಡಿಬಿ ಎಇಇ ಅಧಿಕಾರಿ ಗೋವಿದಂಪ್ಪ ಭಜಂತ್ರಿ ಮನೆ ಮೇಲೆ ಧಾರವಾಡದಲ್ಲಿ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ನಿವಾಸದ ಮೇಲೆ ದಾಳಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಧಾರವಾಡ ನಗರದ ಗಾಂಧಿನಗರ ಬಡಾವಣೆಯಲ್ಲಿನ ಮನೆ ಮೇಲೆ ಲೋಕಾಯುಕ್ತ ಡಿವೈಎಸ್ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ನಡೆದಿದೆ. ಆಸ್ತಿ ದಾಖಲೆಗಳ ಪರಿಶೀಲನೆ ಮಾಡಲಾಗಿದೆ.
ಸವದತ್ತಿ ತಾಲೂಕಿನ ಹೂಲಿ ಹಾಗೂ ಉಗರಗೋಳ ಗ್ರಾಮದ ಫಾರ್ಮ್ ಹೌಸ್ ಮೇಲೆ ರೇಡ್ ಮಾಡಲಾಗಿದೆ. ಗೋವಿಂದಪ್ಪ ಕೆಲಸ ಮಾಡುವ ಲಕಮನಹಳ್ಳಿ ಧಾರವಾಡ ಕೆಐಎಡಿಬಿ ಕಚೇರಿಯಲ್ಲಿ ಪರಿಶೀಲನೆ ಮಾಡಿದ್ದಾರೆ. ನರಗುಂದದಲ್ಲಿರೋ ಸಹೋದರನ ಮನೆ ಮೇಲೂ ದಾಳಿ ನಡೆದಿದೆ. ಗೋವಿಂದಪ್ಪನ ಮನೆ ಎದುರು ನಿಲ್ಲಿಸಿದ್ದ ಕಾರುಗಳ ಪರಿಶೀಲನೆ ಮಾಡಲಾಗಿದೆ. ದಾಖಲೆ ಪತ್ರಗಳ ಬಗ್ಗೆ ಪರಿಶೀಲನಾ ವರದಿಯಲ್ಲಿ ನಮೂದಿಸಿಕೊಂಡಿದ್ದಾರೆ.
ಹಾವೇರಿ
ಹಾವೇರಿಯಲ್ಲೂ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಆಸ್ತಿ ಗಳಿಕೆ ಆರೋಪದಡಿ ರೆಡ್ ಮಾಡಲಾಗಿದ್ದು, ರಾಣೇಬೆನ್ನೂರು ನಗರ, ಹಾವೇರಿ ನಗರದಲ್ಲಿ ಏಕಕಾಲದಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್ ಮನೆ ಮೇಲೆ ದಾಳಿ. ಕಾಶಿನಾಥ್ ಭಜಂತ್ರಿ ರಾಜ್ಯ ಪಂಚಾಯತ್ ಇಂಜಿನಿಯರಿಂಗ್ ಸಹಾಯಕ ಇಂಜಿನಿಯರ್ ಮನೆ ಮೇಲೆ ರೆಡ್. ಇಬ್ಬರ ಅಧಿಕಾರಿಗಳಿಗೆ ಸೇರಿದ ನಾಲ್ಕು ಮನೆಗಳು,ಫಾರ್ಮ ಹೌಸ್,ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ. ಸದ್ಯ ನಾಲ್ಕು ತಂಡಗಳಿಂದ ಮನೆಯಲ್ಲಿ ಶೋದಕಾರ್ಯ. ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ ನೇತೃತ್ವದಲ್ಲಿ ದಾಳಿ.
ಚನ್ನಪಟ್ಟಣ
ಚನ್ನಪಟ್ಟಣ ನಗರಸಭೆ ಆಯುಕ್ತರ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರಸಭೆ ಆಯುಕ್ತ ನಾಗೇಶ್ ಅವರ ಶ್ರೀರಂಗಪಟ್ಟಣದ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ ನಡೆಸಿದ್ದಾರೆ. ಈ ಹಿಂದೆ ಅವರು ಮಂಡ್ಯದ ಶ್ರೀರಂಗಪಟ್ಟಣದ ತಹಶಿಲ್ದಾರ್ ಆಗಿದ್ದರು. ತಹಶಿಲ್ದಾರ್ ಆಗಿದ್ದಾಗ ಶ್ರೀರಂಗಪಟ್ಟಣದ ಡಾಲರ್ಸ್ ಕಾಲೋನಿಯಲ್ಲಿ ಅಪಾರ್ಟ್ಮೆಂಟ್ ನಿರ್ಮಿಸಿದ್ದರು. ನಾಗೇಶ್ ಅಪಾರ್ಟ್ಮೆಂಟ್ ಪಕ್ಕದ ಬಾಡಿಗೆ ಮನೆ ಮೇಲೆ ಮೈಸೂರು ಲೋಕಾಯುಕ್ತ ಪೊಲೀಸರ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಬೀದರ್ಬೀದರ್ನಲ್ಲಿ ಎರಡು ಕಡೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಪೋಲಿಸರು ಶಾಕ್ ಕೊಟ್ಟಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ರವೀಂದ್ರ ರೊಟ್ಟೆ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.
ದಾವಣಗೆರೆ
ದಾವಣಗೆರೆಯ ಶಕ್ತಿನಗರದ 3ನೇ ಕ್ರಾಸ್ನಲ್ಲಿರುವ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಸಹಾಯಕ ನಿರ್ದೇಶಕ ಕಮಲ್ ರಾಜ್ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ. ಎಸ್ಪಿ ಎಂ.ಎಸ್.ಕೌಲಾಪುರೇ ನೇತೃತ್ವದಲ್ಲಿ ದಾಳಿ ನಡೆದಿದೆ. ಸಿಪಿಐ ಮಧುಸೂಧನ್, ಪ್ರಭು ಸೇರಿದಂತೆ ಹತ್ತಕ್ಕೂ ಹೆಚ್ಚು ಸಿಬ್ಬಂದಿಯಿಂದ ಶೋಧ ಕಾರ್ಯ ನಡೆದಿದೆ. ಮನೆಯ ಪ್ರತಿಯೊಂದು ಕೋಣೆಯನ್ನು ಪರಿಶೀಲನೆ ಮಾಡಿದ್ದಾರೆ.
ಬೆಳಗಾವಿಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮ ಲೆಕ್ಕಾಧಿಕಾರಿ ಲೆಕ್ಕಾಧಿಕಾರಿ ವಿಠ್ಠಲ ಡವಳೇಶ್ವರ ಎನ್ನುವವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಬೋರಗಾಂವ ಗ್ರಾಮದ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಮನೆಯಲ್ಲಿ ಒಂದು ಲಕ್ಷ ರೂ ಹಣ ಪತ್ತೆಯಾಗಿದೆ. ನಿಪ್ಪಾಣಿ ಪಟ್ಟಣದ ಬಾಡಿಗೆ ಮನೆ ಮೇಲೂ ದಾಳಿ ನಡೆಸಿ, ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ಈ ಹಿಂದೆ ವಿಠ್ಠಲ ಅವರು ಬೆಳಗಾವಿಯಿಂದ ಬಾಗಲಕೋಟೆಗೆ ಅಕ್ರಮವಾಗಿ 1 ಕೋಟಿ 10 ಲಕ್ಷ ಹಣ ಸಾಗಿಸುವ ವೇಳೆ ರಾಮದುರ್ಗ ಚೆಕ್ಪೋಸ್ಟ್ ಅಧಿಕಾರಿಗಳ ದಾಳಿ ಮಾಡಲಾಗಿತ್ತು.