BREAKING NEWS: ‘ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ’ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆ | Former DCM Laxman Savadi joins Congress
ನಗರದ ಸಭಾಪತಿ ಬಸವರಾಜ ಹೊರಟ್ಟಿ ಅವರ ಸರ್ಕಾರಿ ನಿವಾಸಕ್ಕೆ ಇಂದು ಭೇಟಿಯಾಗಿದ್ದಂತ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ತಮ್ಮ ಬಿಜೆಪಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಕ್ಕೂ ಮುನ್ನ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ತಮಗೆ ನೀಡಿದ್ದಂತ ವಿವಿಧ ಹುದ್ದೆಗೂ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಸಲ್ಲಿಸಿದ್ದರು ಈ ಬೆನ್ನಲ್ಲೆ ಸಭಾಪತಿ ನಿವಾಸದಿಂದ ನೇರವಾಗಿ ಬೆಂಗಳೂರಿನ ಕ್ವೀನ್ ರಸ್ತೆಯಲ್ಲಿರುವಂತ ಕೆಪಿಸಿಸಿ ಕಚೇರಿಗೆ ತೆರಳಿದಂತ ಲಕ್ಷ್ಮಣ್ ಸವದಿ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು…